ಉಡುಪಿ: ಮಹಿಳೆಗೆ ಚುಡಾಯಿಸಿದ ಪ್ರಕರಣ: ಆರೋಪಿ ಠಾಣೆಯಲ್ಲೇ ಮೃತ್ಯು

ಉಡುಪಿ: ಮಹಿಳೆಗೆ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿದ್ದ ಆರೋಪಿ ಠಾಣೆಯಲ್ಲೇ ಮೃತಪಟ್ಟಿದ್ದಾನೆ. ಬ್ರಹ್ಮಾವರ ಪೊಲೀಸ್ ಠಾಣೆಯ ಸೆಲ್ ನ ಬಾತ್ ರೂಮಿನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು ಮೋಹನ್(42) ಎಂದು ಗುರುತಿಸಲಾಗಿದೆ. ಈತ ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದನು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನ.9ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ […]