ಉಡುಪಿ:ಬಿ.ಎಸ್.ಎನ್.ಎಲ್ ಟವರ್ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿ :ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ವ್ಯಾಪ್ತಿಗಳಲ್ಲಿರುವ ಬಿ.ಎಸ್.ಎನ್.ಎಲ್ ಟವರ್‌ಗಳನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡಲು ಬಿ.ಎಸ್.ಎನ್.ಎಲ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಮಂಗಳವಾರ ನಗರದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೆಟ್ವರ್ಕ್ ಹಾಗೂ ಟವರ್ಸಮಸ್ಯೆ ಕುರಿತು ಬಿ.ಎಸ್.ಎನ್.ಎಲ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯ ಗ್ರಾಮೀಣ ಭಾಗದ ಬಿ.ಎಸ್.ಎನ್.ಎಲ್ ಟವರ್‌ಗಳ ಸೇವೆ ಲಭ್ಯತೆ ಇದ್ದರೂ […]