ಮಾ.31ರಂದು ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

ಉಡುಪಿ: ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ನಗರ ಬಿಜೆಪಿ ವತಿಯಿಂದ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್‌ವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕುಮಾರ್ ತಿಳಿಸಿದರು. ಈ ಬಗ್ಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆಯ ಬಳಿಕ ಪಾರ್ಕಿಂಗ್ ಪ್ರದೇಶದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ […]