ಬ್ರಹ್ಮಾವರ:ಎ.30 ರಂದು ರಾಷ್ಟ್ರೋತ್ಥಾನ ವಿದ್ಯಾಸಂಸ್ಥೆಗಳ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ

ಉಡುಪಿ: ಬ್ರಹ್ಮಾವರ ತಾಲೂಕು ಚೇರ್ಕಾಡಿ ಗ್ರಾಮದ ಕೇಶವ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಉಡುಪಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ (ಸಿಬಿಎಸ್‌ಸಿ) ಹಾಗೂ ರಾಷ್ಟ್ರೋತ್ಥಾನ ಪದವಿಪೂರ್ವ ಕಾಲೇಜು ಕಟ್ಟಡಗಳ ಲೋಕಾರ್ಪಣೆ ಎ.30ರಂದು ನಡೆಯಲಿದೆ ಎಂದು ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ನಾ.ದಿನೇಶ್ ಹೆಗ್ಡೆ ತಿಳಿಸಿದ್ದಾರೆ. ಕೇಶವನಗರದಲ್ಲಿ 20 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾಲಾ ಕಟ್ಟಡದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು. ಎ.30ರ ಬುಧವಾರ ಸಂಜೆ 4:30ಕ್ಕೆ ಲೋಕಾರ್ಪಣೆ ನಡೆಯಲಿದ್ದು, ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರ ಉಪಸ್ಥಿತಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ […]