ಉಡುಪಿ: ಡಿ.5ಕ್ಕೆ ಕಟ್ಟಡ ಕಾರ್ಮಿಕರ ನೋಂದಣಿ ಶಿಬಿರ
ಉಡುಪಿ: ನಗರದ ಬೀಡಿನಗುಡ್ಡೆ ವ್ಯಾಪ್ತಿಯ ವಲಸೆ ಕಾರ್ಮಿಕರ ಕಾಲೋನಿಯಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರನ್ನು ಫಲಾನುಭವಿಯನ್ನಾಗಿ ನೋಂದಾಯಿಸುವ ಸಲುವಾಗಿ ಡಿಸೆಂಬರ್ 5ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಬೀಡಿನಗುಡ್ಡೆ ಮಂಡಳಿಯ ಶಿಶುಪಾಲನಾ ಕೇಂದ್ರದಲ್ಲಿ ಕಟ್ಟಡ ಕಾರ್ಮಿಕರ ನೋಂದಣಿ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಕೇಂದ್ರ ಸರ್ಕಾರದ ಇ-ಶ್ರಮ್ ಕಾರ್ಡ್, ಪಿ.ಎಂ.ಎಸ್.ವೈ.ಎ ಕಾರ್ಡ್, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಕಾರ್ಡ್, ವಾಣಿಜ್ಯ ವಾಹನಗಳ ಕ್ಲೀನರ್ ಮತ್ತು ನಿರ್ವಾಹಕರಿಗೂ ಅನ್ವಯವಾಗುವ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಸಹ ಅವಕಾಶ […]