ಉಡುಪಿ: ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಆಲೂರು, ನಾಡ, ಮೊವಾಡಿ ಗ್ರಾಮಸ್ಥರಿಂದ ಧರಣಿ

ಉಡುಪಿ: ಸರಕಾರಿ ಬಸ್ ಸೌಲಭ್ಯ ಇಲ್ಲದ ಕುಂದಾಪುರ ತಾಲೂಕಿನ ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣಿ, ನಾಡ, ಮೊವಾಡಿ ಗ್ರಾಮಸ್ಥರು ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಮಣಿಪಾಲದ ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಧರಣಿ ನಡೆಸಿದರು. ಧರಣಿಯಲ್ಲಿ ಮಾತನಾಡಿದ ಗ್ರಾಮಸ್ಥರು, ನಾವು ಕೇಳುತ್ತಿರುವ ಮಾರ್ಗದಲ್ಲಿ ಯಾವುದೇ ಬಸ್ಸುಗಳು ಓಡಾಡುತ್ತಿಲ್ಲ. ಇಲ್ಲಿನ ಗ್ರಾಮೀಣ ಪ್ರದೇಶದ ಜನರು ಹಲವಾರು ವರ್ಷಗಳಿಂದ ಬಸ್ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಮಕ್ಕಳು ಶಿಕ್ಷಣಕ್ಕಾಗಿ, ಉದ್ಯೋಗ ಖಾತ್ರಿ ಕೂಲಿಕಾರರು ಪ್ರಯಾಣಕ್ಕೆ ದುಬಾರಿ ವೆಚ್ಚ ನೀಡಿ […]