ಉಡುಪಿ: ಬಸ್ ಪಲ್ಟಿ; ಹಲವು ಮಂದಿಗೆ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಪಲ್ಟಿಯಾಗಿ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಉಡುಪಿ ಕಡೆ ಬರುತ್ತಿದ್ದ ಖಾಸಗಿ ಬಸ್ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೃತ್ತ ನಿರೀಕ್ಷಕ ಪ್ರಮೋದ್ ಹಾಗೂ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.