ಉಡುಪಿ: ಉದ್ಯಮಶೀಲತಾ ತರಬೇತಿ ಕಾರ್ಯಾಗಾರ

ಉಡುಪಿ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯ ಹಾಗೂ ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕಾರ್ಕಳ ಶಾಖಾಗ್ರಂಥಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಧ್ಯಮಶೀಲತಾ ತರಬೇತಿಯ ಕುರಿತು ಒಂದು ದಿನದ ಕಾರ್ಯಗಾರ ನಡೆಯಿತು. ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾರ್ಕಳ ಶಾಖಾ ಗ್ರಂಥಾಲಯದ ಗ್ರಂಥಪಾಲಕಿ ವನಿತಾ, ಕಾರ್ಕಳ ಶ್ರೀ ವೆಂಕರಮಣ ಮಹಿಳಾ […]