ಉಡುಪಿ: ಖ್ಯಾತ ಸಾರಿಗೆ ಉದ್ಯಮಿ ಪಾಂಗಾಳ ರಬೀಂದ್ರ ನಾಯಕ್‌ ನಿಧನ

ಉಡುಪಿ: ಪ್ರಸಿದ್ಧ ಸಾರಿಗೆ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಪಾಂಗಾಳ ರಬೀಂದ್ರ ನಾಯಕ್‌ (99) ಅವರು ಸುದೀರ್ಘ ಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನ ಹೊಂದಿದರು. ರಬೀಂದ್ರ ನಾಯಕ್ 1922ರ ಫೆಬ್ರವರಿ 9ರಂದು ಉಡುಪಿಯಲ್ಲಿ ಜನಿಸಿದರು. ಬಾಂಬೆ ವಿಶ್ವವಿದ್ಯಾನಿಲಯದಲ್ಲಿ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಬಳಿಕ 1945-50ರ ಅವಧಿಯಲ್ಲಿ ಹೊಸದಿಲ್ಲಿಯ ಕೌನ್ಸಿಲ್ ಫಾರ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್, ನ್ಯಾಷನಲ್ ಫಿಸಿಕಲ್ ಲ್ಯಾಬೊರೇಟರಿಯಲ್ಲಿ ಟೆಕ್ನಾಲಜಿಸ್ಟ್ ಆಗಿ ಕೆಲಸ ಮಾಡಿದ್ದರು. ರಾಯಲ್ ಇಂಡಿಯನ್ ನೇವಿಯಲ್ಲಿ ತಾಂತ್ರಿಕ ಸಹಾಯಕರಾಗಿಯೂ ಕೆಲಸ ಮಾಡಿದ್ದರು. […]