ಉಡುಪಿ: ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಸಾವು
ಉಡುಪಿ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಉಡುಪಿಯ ಪುತ್ತೂರು ಗ್ರಾಮದ ಆಶೀರ್ವಾದ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪುತ್ತೂರು ಗ್ರಾಮದ ರಾಮಚಂದ್ರ ರಾವ್ ಎಂದು ಗುರುತಿಸಲಾಗಿದೆ. ಇವರು ಇಂದು (ಅ. 23) ಬೆಳಿಗ್ಗೆ 10 ಗಂಟೆ ಸುಮಾರಿಗೆ ಆಶೀರ್ವಾದ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ದಾಟಲು ನಿಂತಿದ್ದರು. ಈ ವೇಳೆ ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುವ ಕಾರೊಂದು ಡಿಕ್ಕಿ […]