ಉಡುಪಿ: ಮದ್ಯವ್ಯಸನಿ ಮಕ್ಕಳ ಜಾಗೃತಿ ಸಪ್ತಾಹ ಅಂಗವಾಗಿ ವ್ಯಂಗ್ಯಚಿತ್ರ ಪ್ರದರ್ಶನ
ಉಡುಪಿ: ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್ ಮಣಿಪಾಲ ಮತ್ತು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಕರಾವಳಿ ಇವರ ಜಂಟಿ ಆಶ್ರಯದಲ್ಲಿ ಶುಕ್ರವಾರ ಬಾಳಿಗಾ ಆಸ್ಪತ್ರೆಯ ಸಭಾಂಗಣದಲ್ಲಿ ಮದ್ಯವ್ಯಸನಿ ಮಕ್ಕಳ ಜಾಗೃತಿ ಸಪ್ತಾಹ ಪ್ರಯುಕ್ತ ವ್ಯಂಗ್ಯಚಿತ್ರ ಪ್ರದರ್ಶನವನ್ನು ಆಯೋಜಿಸಲಾಯಿತು. ಕ್ರಾಫ್ಟ್ಸ್ ಮಂತ್ರ ಇದರ ಸಂಸ್ಥಾಪಕಿ ರೇಣು ಜಯರಾಂ ಕಾರ್ಯಕ್ರಮ ಉದ್ಘಾಟಿಸಿದರು. ಬಾಳಿಗಾ ಆಸ್ಪತ್ರೆಯ ನಿರ್ದೇಶಕ, ಮನೋವೈದ್ಯ ಡಾ. ಪಿ ವಿ ಭಂಡಾರಿ, ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ, ಹಿರಿಯ ವ್ಯಂಗ್ಯಚಿತ್ರಕಾರ ಜೇಮ್ಸ್ ವಾಝ್, ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ […]