ತಿರುಪತಿ ಲಡ್ಡು ಕಲಬೆರಕೆ ಪ್ರಕರಣ; ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ

ಉಡುಪಿ: ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕೃತಕ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ. ಪ್ರಾಣಿಜನ್ಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತಿಳಿಸಿದ್ದಾರೆ. ಅಯೋಧ್ಯೆಯಿಂದ ವಿಡಿಯೋ ಹೇಳಿಕೆ ನೀಡಿರುವ ಪೇಜಾವರ ಶ್ರೀಗಳು, ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ. ಇದು ದೇವರಿಗೆ ಬಗೆದಿರುವ ಅಪಚಾರ. ಸರಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ. ತಿರುಪತಿಯ ಶ್ರೀನಿವಾಸ ದೇವರು, ಗೋವಿನ ರಕ್ಷಣೆಗೆ ಅವತರಿಸಿದವ, […]