ಉಡುಪಿ: ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ, ಈ.ಡಿ, ಸಿ.ಬಿ.ಐ, ಐ.ಟಿ ದುರ್ಬಳಕೆ ಹಾಗೂ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುವ ಷಡ್ಯಂತ್ರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆದಿಉಡುಪಿಯಲ್ಲಿರುವ ಆದಾಯ ತೆರಿಗೆ ಕಚೇರಿಯ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು. ಆದಾಯ ತೆರಿಗೆ ಕಚೇರಿಯ ಗೇಟ್ ನ್ನು ಹತ್ತಿ ಒಳನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು‌ ಕಾರ್ಯಕರ್ತರನ್ನು ತಡೆದರು. […]