ಉಡುಪಿ: ಕೇಂದ್ರ ಬಜೆಟ್ ನಲ್ಲಿ ರಾಜ್ಯ ಸರಕಾರದ ಅವಗಣನೆ ವಿರುದ್ಧ ಕಾಂಗ್ರೆಸ್ ನಿಂದ ಚೊಂಬು ಹಿಡಿದುಕೊಂಡು ಪ್ರತಿಭಟನೆ

ಉಡುಪಿ: ಕೇಂದ್ರ ಬಜೆಟ್ ನಲ್ಲಿ ರಾಜ್ಯ ಸರಕಾರದ ಅವಗಣನೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೈಯಲ್ಲಿ ಚೊಂಬು ಹಿಡಿದುಕೊಂಡು ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಇಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಪಾಲ್ಗೊಂಡಿದ್ದ ನೂರಾರು ಕೈ ಕಾರ್ಯಕರ್ತರು ಚೊಂಬು ಪ್ರದರ್ಶಿಸಿ ಕೇಂದ್ರ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು.ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರು, ಭಾರತ ಇಂದು ಬಡತನದಲ್ಲಿ ಜಗತ್ತಿನಲ್ಲಿಯೇ 111ಸ್ಥಾನದಲ್ಲಿದೆ‌‌. ಶೇ.35ರಷ್ಟು […]