ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ

ಉಡುಪಿ: ರಾಜ್ಯದಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೆಲವು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಯನ್ನು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಖಂಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀಕಾಂತ್ ಉಪಾಧ್ಯಾಯ, ರಾಜ್ಯದಲ್ಲಿ ನಾಲ್ಕು ಜಿಲ್ಲೆಯಲ್ಲಿ ಜನಿವಾರ ತೆಗೆಸಿದ ಘಟನೆ ಬೆಳಕಿಗೆ ಬಂದಿದೆ. ಆದರೆ ಇದು ಇನ್ನೆಷ್ಟು ಕಡೆಗಳಲ್ಲಿ ನಡೆದಿದೆ ಎಂಬುದು ತಿಳಿದಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಇತ್ತೀಚೆಗೆ ಇಂತಹ ಮಾನಸಿಕ ಮನೋಸ್ಥಿತಿ ನಿರ್ಮಾಣವಾಗುತ್ತಿರುವುದು […]