ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಮುಖ್ಯಮಂತ್ರಿ

ಉಡುಪಿ ಶ್ರೀಕೃಷ್ಣಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿ ದೇವರ ಆಶೀರ್ವಾದ ಪಡೆದರು. ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ ಮಾಡಿ ಪೂರ್ಣಕುಂಭದೊಂದಿಗೆ ಸಿಎಂರನ್ನು ಸ್ವಾಗತಿಸಲಾಯಿತು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ದೇವರ ದರ್ಶನ ಮಾಡಿಸಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಶಾಸಕರಾದ ಲಾಲಾಜಿ ಮೆಂಡನ್, ಕರಾವಳಿ ಪ್ರಾಧಿಕಾರದ ಮಟ್ಟಾರ್ ರತ್ನಾಕರ ಹೆಗ್ಡೆ,ಬಿಜೆಪಿ […]