ವಿಶ್ವಕ್ಕೆ ಯೋಗ ಪರಿಚಯಿಸಿದ್ದು, ಭಾರತ ದೇಶದ ಹೆಮ್ಮೆ: ಕೋಟ ಶ್ರೀನಿವಾಸ್ ಪೂಜಾರಿ
ಉಡುಪಿ: ಭಾರತ ದೇಶವು ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಸುಮಾರು 5000 ವರ್ಷಗಳ ಹಿಂದೆ ದೇಶದಲ್ಲಿ ಆರಂಭಗೊಂಡ ಯೋಗವು ಇಂದು 193 ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸಿದ್ಧಿ ಪಡೆದು ಭಾರತೀಯ ಪರಂಪರೆಯನ್ನು ವಿಶ್ವವ್ಯಾಪ್ತಿಗೊಳಿಸಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಶುಕ್ರವಾರ ನಗರದ ಅಜ್ಜರಕಾಡಿನ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ಕೌಟ್ಸ್ ಮತ್ತು […]