ಉಡುಪಿ:ಸಮಾಜದಲ್ಲಿನ ಅಸ್ಥಿರತೆಯನ್ನು ಹೋಗಲಾಡಿಸಲು ಯುವಜನತೆ ಶಕ್ತಿವಂತರಾಗಿ: ನ್ಯಾ. ಕಿರಣ್ ಎಸ್ ಗಂಗಣ್ಣವರ್
ಉಡುಪಿ: ಸಮಾಜದಲ್ಲಿನ ಅಸ್ಥಿರತೆಯಿಂದಾಗಿ ಬಾಲ್ಯವಿವಾಹ, ಬಾಲಕಾರ್ಮಿಕ, ದೌರ್ಜನ್ಯ ಸೇರಿದಂತೆ ಮತ್ತಿತರ ಪ್ರಕರಣಗಳು ಕಂಡುಬರುತ್ತಿದ್ದು, ಅವುಗಳನ್ನು ಎದುರಿಸಿ, ಪ್ರಕರಣಗಳು ಆಗದಂತೆ ತಡೆಯುವ ನಿಟ್ಟಿನಲ್ಲಿ ಯುವಜನತೆ ಶಕ್ತಿವಂತರಾಗಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಹೇಳಿದರು. ಅವರು ಗುರುವಾರ ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರಕ್ಷಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ […]