ಉಡುಪಿ: ಡಿ.21ರಿಂದ 28ರವರೆಗೆ ಮಕ್ಕಳ ನಾಟಕೋತ್ಸವ
ಉಡುಪಿ: ರಂಗಭೂಮಿ ಉಡುಪಿ ಸಂಸ್ಥೆಯ ವತಿಯಿಂದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಇದೇ ಡಿ.21ರಿಂದ 28ರವರೆಗೆ ಆಯೋಜಿಸಿರುವ ಮಕ್ಕಳ ನಾಟಕೋತ್ಸವದಲ್ಲಿ ಆಯ್ದ 12 ಪ್ರೌಢಶಾಲೆಗಳ ವಿದ್ಯಾರ್ಥಿಗಳು 12 ನಾಟಕಗಳನ್ನು ಪ್ರದರ್ಶಿಸಲಿದ್ದಾರೆ ಎಂದು ರಂಗಭೂಮಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಯುವಜನರು ಮತ್ತು ಮಕ್ಕಳಲ್ಲಿ ರಂಗಭೂಮಿಯ ಕುರಿತು ಅರಿವು ಮೂಡಿಸಿ, ಆಸಕ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ಉಡುಪಿಯ ಆಯ್ದ ಹನ್ನೆರಡು ಪ್ರೌಢಶಾಲೆಗಳಲ್ಲಿ “ರಂಗಭೂಮಿ ರಂಗಶಿಕ್ಷಣ” ಎಂಬ ರಂಗ […]