ಉಡುಪಿ:ಮಕ್ಕಳ ಹಕ್ಕುಗಳ ರಕ್ಷಣೆ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ :ಡಾ.ತಿಪ್ಪೇಸ್ವಾಮಿ ಕೆ.ಟಿ
ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆಗೆ ಇರುವ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಲಾಖೆಗಳು ಸಮನ್ವಯತೆ ಹೊಂದುವುದರ ಜೊತೆಗೆ ಮಕ್ಕಳ ಜೀವನ ಮಟ್ಟವನ್ನು ಉತ್ತಮಗೊಳಿಸಲು ಅಧಿಕಾರಿಗಳು ಕ್ರಿಯಾಶೀಲರಾಗಿಕರ್ತವ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಸಮಾಜದಲ್ಲಿ ದುರ್ಬಲರಾದ ಮಕ್ಕಳ ರಕ್ಷಣೆಗೆ ಸರ್ಕಾರ ಅನೇಕ ಕಾಯಿದೆಗಳು ಯೋಜನೆಗಳು […]