ಉಡುಪಿ:ಮಕ್ಕಳ ರಕ್ಷಣೆಗಿರುವ ಕಾಯಿದೆಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ

ಉಡುಪಿ: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಜಾರಿಗೊಳಿಸಲಾದ ಕಾಯಿದೆಗಳು, ಯೋಜನೆಗಳು ಹಾಗೂ ನಿಯಮಾವಳಿಗಳು ಕೇವಲ ಸುತ್ತೋಲೆಗಳಿಗಷ್ಟೇ ಸೀಮಿತವಾಗಿರದೇ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಅವರು ಶುಕ್ರವಾರ ನಗರದ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು […]