ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಕ್ರಿಸ್ಮಸ್ ’ ಆಚರಣೆ
![](https://udupixpress.com/wp-content/uploads/2024/12/IMG_20241225_203334.jpg)
ಉಡುಪಿ: ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಏಸುವಿನ ಜನ್ಮದಿನ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು. ಹಬ್ಬದ ಅಂಗವಾಗಿ ಕ್ರೈಸ್ತರು ಮಂಗಳವಾರ ರಾತ್ರಿಯೇ ಸಮೀಪದ ಚರ್ಚುಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸ್ನೇಹಿತರು, ಬಂಧು ಬಾಂಧವರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಸಂಜೆಯ ಬಲಿಪೂಜೆಯನ್ನು ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಅರ್ಪಿಸಿ ಹಬ್ಬದ ಸಂದೇಶ ನೀಡಿದರು. ಈ […]