ಉಡುಪಿ: ಬೆಲೆ ಏರಿಕೆ ಖಂಡಿಸಿ ಅಣಕು ಶವಯಾತ್ರೆ; ನಾಗರಿಕ‌ ಸಮಿತಿಯಿಂದ ವಿಭಿನ್ನ ಪ್ರತಿಭಟನೆ

ಉಡುಪಿ: ಇಂಧನ, ಅಡಿಗೆ ಅನಿಲ ಸಹಿತ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಅಜ್ಜರಕಾಡು ಹುತಾತ್ಮರ ಸೈನಿಕ ಸ್ಮಾರಕದ ಬಳಿ ಗುರುವಾರ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಅಣಕು ಶವಯಾತ್ರೆ ಮಾಡುವ ಮೂಲಕ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ನಗರದ ಜೋಡುಕಟ್ಟೆಯಿಂದ ಪ್ರತಿಭಟನಾ ಸ್ಥಳದವರೆಗೆ ಅಣಕು ಶವಯಾತ್ರೆ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾ ನಾಗರಿಕ ಸಮಿತಿ […]