ಉಡುಪಿ: ಜುಲೈ 1ರಿಂದ ಸಿಟಿ, ಸರ್ವಿಸ್ ಬಸ್ ಸಂಚಾರ ಆರಂಭ; ಟಿಕೆಟ್ ದರ ಹೆಚ್ಚಳ
ಉಡುಪಿ: ಜಿಲ್ಲೆಯಲ್ಲಿ ಜುಲೈ 1ರಿಂದ ಹಂತ ಹಂತವಾಗಿ ಸಿಟಿ ಹಾಗೂ ಸರ್ವೀಸ್ ಬಸ್ ಸಂಚಾರ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದಲ್ಲಿ ನಡೆದ ಶಾಸಕರು, ಅಧಿಕಾರಿಗಳು, ಬಸ್ ಮಾಲೀಕರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ. ಶೇ. 25ರಷ್ಟು ಟಿಕೆಟ್ ದರ ಹೆಚ್ಚಳ: ಡೀಸೆಲ್ ದರ ಏರಿಕೆ ಹಾಗೂ ಶೇ. […]