ಎಂ.ಆರ್.ಎಫ್ ಘಟಕದಿಂದ ಉಡುಪಿ ನಗರ ಇನ್ನಷ್ಟು ಸ್ವಚ್ಛ ಮತ್ತು ಸುಂದರ: ಶಾಸಕ ಕೆ. ರಘುಪತಿ ಭಟ್

ಉಡುಪಿ: ಕರ್ವಾಲ್‌ನಲ್ಲಿ ಆರಂಭಿಸಿರುವ ಎಂ.ಆರ್.ಎಫ್ ಘಟಕದಲ್ಲಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಮೂಲಕ ಉಡುಪಿ ನಗರವನ್ನು ಇನ್ನಷ್ಟು ಸ್ವಚ್ಛ ಮತ್ತು ಸುಂದರ ನಗರವನ್ನಾಗಿ ಮಾಡಲು ಸಾಧ್ಯವಾಗಲಿದೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ಕರ್ವಾಲುನಲ್ಲಿ, ಉಡುಪಿ ನಗರಸಭೆಯಿಂದ, 2.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ 10 ಟನ್ ಸಾಮರ್ಥ್ಯದ ನೂತನ ಎಂ.ಆರ್.ಎಫ್. ಘಟಕ ಉದ್ಘಾಟಿಸಿ ಮಾತನಾಡಿದರು. ಉಡುಪಿ ನಗರದಲ್ಲಿ ಪ್ರಸ್ತುತ ಪ್ರತಿದಿನ 20 ಟನ್ ಒಣ ಕಸ ಸಂಗ್ರಹ ನಡೆಯುತ್ತಿದ್ದು, ಬೀಡನಗುಡ್ಡೆ ಮತ್ತು ಕರಾವಳಿ […]