ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ

ಉಡುಪಿ: ಕಡಲ ತೀರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಜಲಚರಗಳ ಅಸ್ತಿತ್ವಕ್ಕೆತೊಂದರೆಯಾಗುತ್ತಿದೆ. ಈ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಡಲ ತೀರ ಸ್ವಚ್ಛತಾ ದಿನವನ್ನು ಆಚರಿಸಲಾಗುತ್ತಿದ್ದು,ಸಾರ್ವಜನಿಕರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಶನಿವಾರ ಕುಂದಾಪುರ ತಾಲೂಕಿನ ಕೋಡಿ ಸಮುದ್ರ ತೀರದಲ್ಲಿ ಅಂತರಾಷ್ಟ್ರೀಯ ಕಡಲ ತೀರ ಸ್ವಚ್ಚತಾ ದಿನದ ಅಂಗವಾಗಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಕುಂದಾಪುರ ಪುರಸಭೆ ಆಶ್ರಯದಲ್ಲಿ ನಡೆದ ಕಡಲ ತೀರ ಸ್ವಚ್ಚತಾ ದಿನ […]