ಉಡುಪಿ:ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಉದ್ಘಾಟನೆ
ಉಡುಪಿ: ಉಡುಪಿ ನಗರಸಭೆ ವತಿಯಿಂದ ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ ಎಂಬ ಧ್ಯೇಯ ವಾಕ್ಯದಲ್ಲಿನಡೆಯುತ್ತಿರುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇಂದು ಮಲ್ಪೆ ವಿಠೋಬಾ ಭಜನಾ ಮಂದಿರದ ಬಳಿ ನಡೆಯಿತು. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಮ್ಮ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ನಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ನಮ್ಮಸುತ್ತ ಪರಿಸರ ಸ್ವಚ್ಛವಾಗಿದ್ದಾಗ ನಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು […]