ಉಡುಪಿ: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವಿವರ ಫಲಕ ಕಡ್ಡಾಯ: ಡಿಸಿ ಜಿ. ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಕಾಯ್ದೆಯಡಿ ನೊಂದಾಯಿತವಾದ ಎಲ್ಲಾ ಆಸ್ಪತ್ರೆ, ಕ್ಲಿನಿಕ್‌ಗಳು, ತಮ್ಮಲ್ಲಿ ದೊರೆಯುವ ವಿವಿಧ ಚಿಕಿತ್ಸೆಗಳು, ಚಿಕಿತ್ಸೆಯ ದರಗಳು, ಚಿಕಿತ್ಸಾ ವಿಧಾನಗಳು (ಅಲೋಪತಿ, ಆಯುರ್ವೇದ ಇತ್ಯಾದಿ), ವೈದ್ಯರ ವಿವರಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಹಾಗೂ ಇದು ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಮತ್ತು ಅವರ ಸಂಬಂಧಿಕರಿಗೆ ಸ್ಪಷ್ಟವಾಗಿ ಗೋಚರಿಸುವಂತಿರಬೇಕು. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ […]