ನಿಮ್ಮ ಸರಕಾರಕ್ಕೆ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ? ಸಿಎಂ ಸಿದ್ದರಾಮಯ್ಯನವರಿಗೆ ಸುನಿಲ್ ಕುಮಾರ್ ಪ್ರಶ್ನೆ.

ಕಾರ್ಕಳ: ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಷವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್‌ಗಳಿಗೆ ಆಳುವ ಸರಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಆರೋಪಿಸಿದ್ದಾರೆ. ಈ ಕುರಿತು ತಮ್ಮ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸುನಿಲ್‌ ಕುಮಾರ್, ಉಡುಪಿ-ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು-ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ […]