ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ
ಉಡುಪಿ: ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಇಂದು ಧರಣಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಧರಣಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನಾಡಿನ ಜನತೆ ಬಗ್ಗೆ ಗೌರವ […]