ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ಬುಧವಾರ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 81 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 12,400 ರೂ. ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಸೂಚಿಸಲಾಯಿತು. ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, […]