ರಾಜ್ಯ ಸರಕಾರದಿಂದ ಕರಾವಳಿಯ 3 ಜಿಲ್ಲೆಗಳ ನಿರ್ಲಕ್ಷ್ಯ:ಉಡುಪಿ ಬಿಜೆಪಿ ಶಾಸಕರ ಎಚ್ಚರಿಕೆ
ಉಡುಪಿ, ಸೆ.16: ರಾಜ್ಯ ಸರಕಾರ ಕರಾವಳಿಯ ಮೂರು ಜಿಲ್ಲೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಒಂದು ರೂಪಾಯ ಅನುದಾನ ಬಿಡುಗಡೆಯಾಗಿಲ್ಲ. ಇದೇ ಪ್ರವೃತ್ತಿ ಮುಂದುವರಿದರೆ ಮುಖ್ಯಮಂತ್ರಿಗಳ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದು ಉಡುಪಿ ಜಿಲ್ಲೆಯ ಐವರು ಬಿಜೆಪಿ ಶಾಸಕರು, ಸಂಸತ್ ಸದಸ್ಯರೊಂದಿಗೆ ಇಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು. ನಗರದ ಹೊಟೇಲ್ ಕಿದಿಯೂರು ಸಭಾಂಗಣದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರ ಉಪಸ್ಥಿತಿಯಲ್ಲಿ […]