ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತಸಾಲಿನಲ್ಲಿ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ವೈಯಕ್ತಿಕ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೈಯಕ್ತಿಕ ಫಲಾನುಭವಿಗಳು ಅರ್ಜಿಯೊಂದಿಗೆ ಪಹಣಿಪತ್ರ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ಪ್ರತಿ, ನಿಗಧಿತ ಮೊತ್ತದ ಛಾಪಾ ಕಾಗದದಲ್ಲಿ ಮುಚ್ಚಳಿಕೆ ಪತ್ರದೊಂದಿಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಕಚೇರಿಯಲ್ಲಿ ಆಗಸ್ಟ್ 20 ರ ಒಳಗಾಗಿಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಾಗೂ ಬೇಲರ್ ಅನ್ನು ಕಡ್ಡಾಯವಾಗಿ ಖರೀದಿಸಬೇಕು. ಇವುಗಳೊಂದಿಗೆ […]