ಜನಸಾಮಾನ್ಯರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜನಸ್ಪಂದನ ಕಾರ್ಯಕ್ರಮದಲ್ಲಿ ಜನಸಾಮಾನ್ಯರು ತಮ್ಮ ಸಮಸ್ಯೆಗಳನ್ನು ಅಹವಾಲು ಮೂಲಕ ನೀಡಿದ ಅರ್ಜಿಗಳನ್ನು ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಶೀಘ್ರದಲ್ಲಿಯೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು. ಅವರು ಶುಕ್ರವಾರ ಬ್ರಹ್ಮಾವರದ ನಾರಾಯಣ ಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬ್ರಹ್ಮಾವರ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಬ್ರಹ್ಮಾವರ ಇವರ ಸಹಯೋಗದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಮಾತನಾಡುತ್ತಿದ್ದರು. ಜನಸ್ಪಂದನ ಸಭೆಗಳು ಜನರಿಗೆ ಸಹಕಾರಿ ಯಾಗಬೇಕು. ಅಧಿಕಾರಿಗಳು ಸಮಸ್ಯೆ ಇತ್ಯರ್ಥಪಡಿಸಲು ಸೂಕ್ಷ್ಮ ರೀತಿಯಲ್ಲಿ ಸ್ಪಂದಿಸಬೇಕು. ರಸ್ತೆ ಸಮಸ್ಯೆ, […]