ಉಡುಪಿಯಲ್ಲಿ ಉಚಿತ ಕಂಪ್ಯೂಟರ್ ತರಬೇತಿ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉಡುಪಿಯಲ್ಲಿ ಸಾಫ್ಟ್ ಸ್ಕೀಲ್ಸ್ ಮತ್ತು ಬೇಸಿಕ್ ಕಂಪ್ಯೂಟರ್, ಕನ್ನಡನುಡಿ ಟೈಪಿಂಗ್ ತರಬೇತಿಯನ್ನು ಪಡೆಯಲು ಇಚ್ಚಿಸುವ ಆಸಕ್ತ ಯುವಕ- ಯುವತಿಯರು, ವಿದ್ಯಾರ್ಥಿಗಳು ನೋಂದಾವಣಿ ಮಾಡಬಹುದಾಗಿದೆ. ತರಬೇತಿಯು ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಅಥವಾ ದೂ.ಸಂಖ್ಯೆ: 0820-2574869, 9480259790 ನ್ನು ಸಂಪರ್ಕಿಸುವಂತೆ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.