ಉಡುಪಿ:ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣ ಕಲ್ಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸರಕಾರ ಜಾರಿಗೆ ತಂದಿರುವ ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದುಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಉತ್ತಮವಾಗಿ ಅನುಭವಿಸಿ, ಶಿಕ್ಷಣ ಸೇರಿದಂತೆ ಮತ್ತಿತರ ಬಗ್ಗೆ ಜ್ಞಾನ ಹೊಂದಿ, […]