ಕರಾವಳಿ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನ ಆಯೋಜನೆ
ಉಡುಪಿ: ಭಾರತೀಯರಾಗಿ ನಾವು ಒಗ್ಗಟ್ಟಾಗಿರಬೇಕು. ಪ್ರತಿಯೊಬ್ಬ ಭಾರತೀಯರು ಕನ್ನಡಿಗರಲ್ಲ. ಆದರೆ ಪ್ರತಿಯೊಬ್ಬ ಕನ್ನಡಿಗರು ಭಾರತೀಯರು. ಈ ಚಿಂತನೆ ನಮ್ಮಲ್ಲಿ ಬೆಳೆಯಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ಕುಂಜಿಬೆಟ್ಟು ಶಾರಾದಾ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ “ಕರಾವಳಿ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಭಾರತಕ್ಕೆ ಗೌರವ ಕೊಡುತ್ತಾ ನಮ್ಮ ಕನ್ನಡ ಪರಂಪರೆಯನ್ನು ಮುಂದುವರಿಸಬೇಕು. […]