ಉಡುಪಿ: ಕಾಂಗ್ರೆಸ್ ನಿಂದ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಡುಪಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯು ಇಂದು ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ವತಿಯಿಂದ ಜರಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು, ಮಹಾತ್ಮಾ ಗಾಂಧಿಯವರ ತತ್ವಾದರ್ಶಗಳನ್ನು ಓರ್ವ ವ್ಯಕ್ತಿ, ಒಂದು ಸಂಸ್ಥೆ, ಒಂದು ಪಕ್ಷ ಪಾಲಿಸಿಕೊಂಡು ಬಂದರೆ ಜೀವನ ಪಾವನವಾಗಲು ಬೇರೇನೂ ಬೇಕಾಗಿಲ್ಲ. ಮಹಾತ್ಮಾ ಗಾಂಧೀಜಿಯವರ ಅಹಿಂಸಾ ತತ್ವ ಜನಮನ್ನಣೆಗಳಿಸಿ […]