ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆರೋಗ್ಯ ಹಸ್ತ ಕಾರ್ಯಕರ್ತರಿಗೆ ಆರೋಗ್ಯ ಕಿಟ್ ವಿತರಣೆ
ಉಡುಪಿ: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಕ್ಷದ ಆರೋಗ್ಯ ಹಸ್ತ ಕಾರ್ಯಕರ್ತರಿಗೆ ಆರೋಗ್ಯ ಕಿಟ್ ವಿತರಣೆ ಹಾಗೂ ಮಾಹಿತಿ ಕಾರ್ಯಾಗಾರ ಇಂದು ನಡೆಯಿತು. ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಮನೆ ಮನೆ ಭೇಟಿ ನೀಡಿ ಕೊರೊನಾ ಜಾಗೃತಿ ಮೂಡಿಸುತ್ತಿರುವ ಪಕ್ಷದ ಕೊರೊನಾ ವಾರಿಯರ್ಸ್ ಗಳ ಕಾರ್ಯ ಶ್ಲಾಘನೀಯವಾದುದು. ಕೊರೊನಾ ಲಕ್ಷಣ ಇರುವ ಜನರನ್ನು ವೈದ್ಯರನ್ನು ಸಂಪರ್ಕಿಸುವಂತೆ ಮಾಹಿತಿ ನೀಡುವುದರ ಮೂಲಕ ಕೊರೊನಾ ತಡೆಗಟ್ಟಲು ವಾರಿಯರ್ಸ್ ಗಳು ಶ್ರಮಿಸಬೇಕು ಎಂದರು. ಕೆಪಿಸಿಸಿ ವೀಕ್ಷಕರಾದ ಪುರುಷೋತ್ತಮ […]