ಉಡುಪಿ: ಕಾಂಗ್ರೆಸ್ ಮುಖಂಡ ಆಸ್ಕರ್‌ಗೆ ಬಿಜೆಪಿಯಿಂದ ಶ್ರದ್ಧಾಂಜಲಿ
ಉಡುಪಿ: ಅಗಲಿದ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನುಡಿನಮನ ಸಲ್ಲಿಸಲಾಯಿತು. ಆಸ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಸಕ ಕೆ. ರಘುಪತಿ ಭಟ್ ನುಡಿ ನಮನ ಸಲ್ಲಿಸಿದರು. ಬಳಿಕ ಮಾತನಾಡಿ, ವಿರೋಧ ಪಕ್ಷದ ನಾಯಕರು ಅಗಲಿದಾಗ ವಿರೋಧಿ ಪಕ್ಷದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ಸಂಪ್ರದಾಯ ಉಡುಪಿ ಜಿಲ್ಲೆಯಲ್ಲಿ ನಡೆದುಕೊಂಡು ಬಂದಿದೆ. ಇದೇ ರೀತಿ ಡಾ.ವಿ.ಎಸ್.ಆಚಾರ್ಯ ಅಗಲಿದಾಗ […]