ಕಂಚಿನಡ್ಕದಲ್ಲಿ ನಿರ್ಮಿಸಲು ಹೊರಟಿರುವ ಟೋಲ್ ಗೇಟ್ ರದ್ದುಪಡಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಉಡುಪಿ: ಪಡುಬಿದ್ರಿ- ಕಾರ್ಕಳ ರಾಜ್ಯ ಹೆದ್ದಾರಿ ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿರುವ ಟೋಲ್ ಗೇಟ್ ರದ್ದು ಪಡಿಸುವಂತೆ ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಕಂಚಿನಡ್ಕದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು. ಹಿಂದಿನ ಯಡಿಯೂರಪ್ಪ ಸರಕಾರ ಅವಧಿಯಲ್ಲಿ ಟೋಲ್ ಗೇಟ್ ಪ್ರಕ್ರಿಯೆ ಆರಂಭಗೊಂಡಿದ್ದು, ಬೆಳ್ಮಣ್ ನಲ್ಲಿ ಟೋಲ್ ಹೋರಾಟಗಾರರ ಪ್ರತಿಭಟನೆಗೆ ಮಣಿದು ಬೊಮ್ಮಾಯಿ ಸರಕಾರ ಅದನ್ನು ಕಂಚಿನಡ್ಕಕ್ಕೆ ಸ್ಥಳಾಂತರ ಮಾಡಿತ್ತು. ಆದರೆ, ಯಾವುದೇ […]