ಉಡುಪಿ: ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯರ್ತರು ಸಚಿವ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿದರು. ದೇಶದ್ರೋಹದ ಹೇಳಿಕೆ ನೀಡಿರುವ ಈಶ್ವರಪ್ಪರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಕಾಂಗ್ರೆಸ್ […]