ಉಡುಪಿ: ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಕೂಡಲೇ ಬಂಧಮುಕ್ತಿಗೊಳಿಸದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ
ಉಡುಪಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಹಾಗೂ ಶೀಘ್ರವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಲಖಿಂಪುರ್ ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತರಾದ ರೈತರ ಕುಟುಂಬಗಳಿಗೆ ಸ್ವಾಂತನ ಹೇಳಲು ಪ್ರಿಯಾಂಕ ಗಾಂಧಿ ತೆರಳಿದ್ದರು. ಈ ವೇಳೆ ಅವರನ್ನು ಪೊಲೀಸರು ಅಡ್ಡಗಟ್ಟಿ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ಅವಕಾಶ ನೀಡದೆ ಬಂಧಿಸಿರುವುದು ಖಂಡನೀಯ. ಅವರನ್ನು ಕೂಡಲೇ ಬಿಡುಗಡೆ […]