ಉಡುಪಿ: ಮೂರನೇ ದಿನಕ್ಕೆ ಕಾಲಿಟ್ಟ ಕಟ್ಟಡ ನಿರ್ಮಾಣ ಕಾರ್ಮಿಕರ ಧರಣಿ

ಉಡುಪಿ: ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕಟ್ಟಡ ನಿರ್ಮಾಣ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ‌ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವು ಮೂರನೇ ದಿನಕ್ಕೆ ಕಾಲಿಟ್ಟಿದೆ. ಕೆಲಸ ಇಲ್ಲದೆ ಕಾರ್ಮಿಕರು ಧರಣಿ ನಡೆಸುತ್ತಿದ್ದರೂ ಜಿಲ್ಲಾಡಳಿತ ಮಾತ್ರ ಸ್ಪಂದಿಸುತ್ತಿಲ್ಲ. ಕೆಂಪು ಕಲ್ಲು ಕೊರತೆ ಇಲ್ಲ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಹಾಗಾದರೆ ಕೆಂಪು ಕಲ್ಲು ಬೆಲೆ ದುಬಾರಿ ಆಗಿರುವುದು ಯಾಕೆಂದು ಉತ್ತರಿಸಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು. ಕಾನೂನು ಬದ್ಧ ಪರವಾನಿಗೆ ನೀಡಿದ […]