ಉಡುಪಿ: ಕೊರೊನಾ ಸೋಂಕಿತರ ಮನೆ ಸೀಲ್‌ಡೌನ್ ಬದಲು ಕಂಟೈನ್‌ಮೆಂಟ್ ಝೋನ್
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರವು ನಿರೀಕ್ಷಿತ ಪ್ರಮಾಣದಲ್ಲಿ ಇಳಿಕೆ ಆಗದಿರಲು ಬಹುತೇಕ ಮಂದಿ ಹೋಮ್ ಐಸೋಲೇಶನ್‌ನಲ್ಲಿ ಇರುವುದೇ ಕಾರಣ. ಹಾಗಾಗಿ ಮನೆಯಲ್ಲಿರುವ ಸೋಂಕಿತರನ್ನು ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವ ಕಾರ್ಯ ಮಾಡಬೇಕು. ಕೇವಲ ಸೋಂಕಿತರ ಮನೆ ಸೀಲ್‌ಡೌನ್ ಮಾಡುವುದನ್ನು ಬಿಟ್ಟು ಸುತ್ತಲಿನ ನಾಲ್ಕೈದು ಮನೆಗಳನ್ನು ಸೇರಿಸಿ ಕಂಟೈನ್‌ಮೆಂಟ್ ಝೋನ್ ಮಾಡಬೇಕು ಎಂದು ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ […]