ಉಡುಪಿ ಕಂಟೈನ್ ಮೆಂಟ್ ವಲಯಗಳಲ್ಲಿ ಜಾರಿಯಾಗಿದೆ ಕೆಲವೊಂದು ಕಟ್ಟುನಿಟ್ಟಿನ ಆದೇಶ: ಯಾವುದಕ್ಕೆಲ್ಲಾ ನಿಷೇಧವಿದೆ?

ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 (ಕೋರೊನ ವೈರಾಣು ಕಾಯಿಲೆ 2019) ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮೆಂಟ್ ವಲಯಗಳಲ್ಲಿ ಕೆಲವೊಂದು ನಿರ್ಬಂಧನೆಗಳನ್ನು ಹೇರುವುದು ಮತ್ತು ಕಂಟೈನ್ ಮೆಂಟ್  ಹೊರವಲಯಗಳಲ್ಲಿ ಕೆಲವೊಂದು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವೆಂದು ಕಂಡುಬoದಿದ್ದು ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಕೆಳಗಿನಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ. ಏನೆಲ್ಲಾ ನಿಷೇಧ? ಕಂಟೈನ್ ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್ ಡೌನ್ ಇರುತ್ತದೆ. ವೈದ್ಯಕೀಯ  ತುರ್ತು ಸೇವೆಗಳು ಮತ್ತು […]