ಉಡುಪಿ: ಸೊಳ್ಳೆಗಳ ನಿಯಂತ್ರಣದಿಂದ ಮಾತ್ರ ಡೆಂಗ್ಯೂ ನಿರ್ಮೂಲನೆ ಸಾಧ್ಯ – ಡಾ. ಪ್ರಶಾಂತ್ ಭಟ್
ಉಡುಪಿ: ಡೆಂಗ್ಯೂ ಜ್ವರ ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ಕಂಡುಬರುತ್ತದೆ. ಈ ರೋಗ ಸೊಳ್ಳೆಗಳಿಂದಹರಡುವಂಥದ್ದಾಗಿದ್ದು, ಸಾಮಾನ್ಯವಾಗಿ ಸೊಳ್ಳೆಗಳ ಸಂತಾನೋತ್ಪತ್ತಿ ನೀರಿನಲ್ಲಿ ಮೊಟ್ಟೆಗಳನ್ನಿಡುವ ಮೂಲಕ ಆಗುತ್ತದೆ. ಹೀಗಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಎಲ್ಲರೂ ಆದ್ಯತೆ ನೀಡಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್ ತಿಳಿಸಿದರು.ಶುಕ್ರವಾರ ನಗರದ ಪತ್ರಿಕಾ ಭವನದ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇವರ ವತಿಯಿಂದ ಆಯೋಜಿಸಲಾದ ಡೆಂಗ್ಯೂ […]