ಉಡುಪಿ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲು ಬಾಯಿ ಜ್ವರ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸುವಂತೆಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನೀಲಾವರ ಗೋಶಾಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡುತ್ತಿದ್ದರು. ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರುರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು […]