ಉಡುಪಿ: ಕೊರೊನಾಗೆ ಕೊಲ್ಲೂರು ಮೂಲದ 45 ವರ್ಷದ ವ್ಯಕ್ತಿ ಬಲಿ: ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ
ಉಡುಪಿ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಕೊಲ್ಲೂರು ಮೂಲದ 45 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಈ ವ್ಯಕ್ತಿಗೆ ಸೋಂಕು ತಗಲಿದ್ದು, ಕೋವಿಡ್ 19 ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ಉಡುಪಿಯಲ್ಲಿ ಕೊರೊನಾ ಸೋಂಕಿಗೆ 70 ವರ್ಷದ ವೃದ್ಧ ಸಾವು: ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ
ಉಡುಪಿ: ನಗರದ ಡಾ.ಟಿಎಂಎ ಪೈ ಕೊವಿಡ್ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬೈಂದೂರಿನ 70 ವರ್ಷದ ವೃದ್ಧರೊಬ್ಬರು ಇಂದು ಮೃತಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಇವರು ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಇಂದು ಅವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.
ಉಡುಪಿಯಲ್ಲಿ ಕೊರೊನಾಗೆ ಮೊದಲ ಬಲಿ: ಮುಂಬೈನಿಂದ ಆಗಮಿಸಿದ್ದ 54 ವರ್ಷದ ವ್ಯಕ್ತಿ ಮಣಿಪಾಲ ಕೆಎಂಸಿಯಲ್ಲಿ ಸಾವು
ಉಡುಪಿ: ಕ್ವಾರಂಟೈನ್ ನಲ್ಲಿ ಇದ್ದ 54 ವರ್ಷದ ವ್ಯಕ್ತಿ ಮೇ 14ರಂದು ಮೃತಪಟ್ಟಿದ್ದು, ಇಂದು ಬಂದ ಕೊರೊನಾ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಅವರು, ಮೃತ ವ್ಯಕ್ತಿ ಮುಂಬೈನಿಂದ ಕುಂದಾಪುರಕ್ಕೆ ಆಗಮಿಸಿದ್ದು, ಇವರನ್ನು ಕುಂದಾಪುರದ ಕಲ್ಯಾಣ ಮಂಟಪವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಮೇ 13ರಂದು ವ್ಯಕ್ತಿಗೆ ಹೃದಯಾಘಾತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲಿಗೆ ಕುಂದಾಪುರದ ಆಸ್ಪತ್ರೆಗೆ ಹಾಗೂ ಬಳಿಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು […]