ಉಡುಪಿಯಲ್ಲಿ ಮತ್ತೆ ಮೂರು ಕೊರೊನಾ ಪಾಸಿಟಿವ್: ಜನರಲ್ಲಿ ಹೆಚ್ಚಿದ ಆತಂಕ

ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ ಮೂರು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರಲ್ಲಿ ಮತ್ತಷ್ಟು ಆತಂಕ ಉಂಟುಮಾಡಿದೆ. ಇಂದು ಮಧ್ಯಾಹ್ನ ಬಿಡುಗಡೆಗೊಂಡ ರಾಜ್ಯ ಕೋವಿಡ್ ಬುಲೆಟಿನ್ ನಲ್ಲಿ ಯಾವುದೇ ಸೋಂಕು ಕಾಣಿಸಿಕೊಂಡಿಲ್ಲ. ಆದರೆ ಸಂಜೆಯ ವರದಿ ಜಿಲ್ಲೆಯ ಜನರಿಗೆ ಶಾಕ್ ನೀಡಿದೆ. ಮುಂಬೈನಿಂದ ಜಿಲ್ಲೆಗೆ ಆಗಮಿಸಿದ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. 31 ಹಾಗೂ 55 ವರ್ಷದ ಇಬ್ಬರು ಪುರುಷರು ಮತ್ತು 48 ವರ್ಷದ ಒಬ್ಬ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.